spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಒಂದೇ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ದೊಮ್ಮಸಂದ್ರದಲ್ಲಿನ ಖಾಸಗಿ ಶಾಲೆಯೊಂದರ  33 ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಶಾಲೆಯನ್ನು ಸೀಲ್‌ ಡೌನ್.

‘ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು’ ಶಿಕ್ಷಣ ಸಂಸ್ಥೆಯಲ್ಲಿ ಈವರೆಗೆ ವಿದ್ಯಾರ್ಥಿಗಳು ಸೇರಿದಂತೆ 497 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ  8ನೇ ತರಗತಿಯ ಓರ್ವ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢಪಟ್ಟಿರುವುದು ತಿಳಿದುಬಂದಿದೆ.

ಕೋವಿಡ್‌ ದೃಢಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ  ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ. ʼಸೋಂಕಿತ ವಿದ್ಯಾರ್ಥಿಗಳಿಗೆ ಆರೈಕೆ ಒದಗಿಸುತ್ತಿರುವ ಕೇಂದ್ರ ಹಾಗೂ ವಸತಿ ನಿಲಯವನ್ನು ಪ್ರತ್ಯೇಕಿಸಲಾಗಿದೆ’ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ತಿಳಿಸಿದ್ದಾರೆ.

ಇನ್ನು ಶಾಲೆಯ ಸಿಬ್ಬಂದಿಗಳೆಲ್ಲರೂ ಕೋವಿಡ್‌ ಲಸಿಕೆ ಪಡೆದಿದ್ದು, ಯಾರಿಗೂ ಕೋವಿಡ್‌ ಲಕ್ಷಣಗಳಿಲ್ಲ. ಹಾಗಾಗಿ ಯಾರನ್ನು ಆಸ್ಪತ್ರೆಗೆ ದಾಖಲಿಸಲಿಲ್ಲ. ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss