Sunday, July 3, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 337 ಮಂದಿಗೆ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 337 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
148 ಮಂದಿ ಗುಣಮುಖರಾಗಿದ್ದಾರೆ. ಐವರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರದ ವಿವರವನ್ನು ಜಿಲ್ಲಾಡಳಿತ ಒದಗಿಸಿಲ್ಲ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 99264ಕ್ಕೆ ಏರಿಕೆಯಾಗಿದೆ. ಈ ಪೈಕಿ 2363 ಸಕ್ರಿಯ ಪ್ರಕರಣಗಳು. 95499 ಸೋಂಕಿತರು ಗುಣಮುಖರಾಗಿದ್ದಾರೆ. 1402ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಬುಧವಾರ ಕಪ್ಪು ಶಿಲೀಂಧ್ರ ಸೋಂಕಿನ ಒಂದು ಹೊಸ ಪ್ರಕರಣ ವರದಿಯಾಗಿದೆ. ಬುಧವಾರ ಈ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಒಬ್ಬ ಸೋಂಕಿತ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ನ 22 ಸಕ್ರಿಯ ಪ್ರಕರಣಗಳಿವೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss