ನವದೆಹಲಿ: ೩೪ ವರ್ಷಗಳ ನಂತರ ಹೊಸ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅನೇಕ ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ. ಉನ್ನತ ಶಿಕ್ಷಣಕ್ಕಾಗಿ ಒಂದೇ ಸಂಸ್ಥೆ ಇರಲಿದೆ.
- ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವನ್ನು (ಎಂಎಚ್ಆರ್ಡಿ) ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಗಿದೆ.
- ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಗಳ ಪ್ರವೇಶಕ್ಕೆ ಏಕರೂಪ (ಸಾಮಾನ್ಯ) ಪ್ರವೇಶ ಪರೀಕ್ಷೆ ನಡೆಸುವುದು
- ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಮಕ್ಕಳಿಗೆ 5ನೇ ತರಗತಿವರೆಗೆ ಮಾತೃಭಾಷೆಯಲ್ಲಿ ಶಿಕ್ಷಣ ಕಡ್ಡಾಯ
- 2035ರ ವೇಳೆಗೆ ಶೇ. 50ರಷ್ಟು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಿಗುವಂತೆ ಮಾಡುವ ಗುರಿಯನ್ನು ಹೊಸ ಶಿಕ್ಷಣ ನೀತಿ ಒಳಗೊಂಡಿದೆ.
- ಖಾಸಗಿ ಮತ್ತು ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಒಂದೇ ರೀತಿಯ ನಿಯಮ ಅನ್ವಯವಾಗಲಿದೆ.
- ಮಾಸ್ಟರ್ ಆಫ್ ಫಿಲಾಸಫಿ ಕೋರ್ಟ್ಗಳಿಗೆ ಇನ್ನು ಮುಂದೆ ಅವಕಾಶವಿಲ್ಲ
- ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಇ- ಕೋರ್ಸ್ಗಳ ಅಭಿವೃದ್ಧಿಪಡಿಸುವುದು. ವರ್ಚುವಲ್ ಲ್ಯಾಬ್ಗಳು, ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆ ರೂಪಿಸುವುದು
- ಎಲ್ಲ ಉನ್ನತ ಶಿಕ್ಷಣಗಳಿಗೆ ಒಂದೇ ನಿಯಂತ್ರಣ ಸಂಸ್ಥೆ ಇರಲಿದೆ.
- ಶೈಕ್ಷಣಿಕ, ಆಡಳಿತ ಹಾಗೂ ಹಣಕಾಸು ಸ್ವಾಯತ್ತತೆಯನ್ನು ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗುತ್ತದೆ.
- ಪ್ರಸ್ತುತ ಡೀಮ್ಡ್ ವಿವಿಗಳು, ಸೆಂಟ್ರಲ್ ವಿವಿಗಳು, ಪ್ರತ್ಯೇಕ ಸಂಸ್ಥೆಗಳಿಗೆ ಪ್ರತ್ಯೇಕ ನಿಯಮಾವಳಿಗಳಿವೆ. ಹೊಸ ಶಿಕ್ಷಣ ನೀತಿಯ ಅನ್ವಯ, ಗುಣಮಟ್ಟದ ಕಾರಣಗಳಿಂದ ಎಲ್ಲ ಸಂಸ್ಥೆಗಳಿಗೂ ಒಂದೇ ರೀತಿಯ ನಿಯಮಗಳು ಅನ್ವಯವಾಗಲಿದೆ.
- ವಿದ್ಯಾರ್ಥಿಗಳಿಗೆ ಪ್ರಗತಿ ಪತ್ರಗಳಲ್ಲಿ ಕೇವಲ ಅಂಕಗಳು ಹಾಗೂ ಟಿಪ್ಪಣಿಗಳ ಬದಲು ಕೌಶಲ ಹಾಗೂ ಅರ್ಹತೆಗಳ ಸಮಗ್ರ ವರದಿ ನೀಡಲಾಗುತ್ತದೆ.
- ವೃತ್ತಿ ಆಧಾರಿತ ವಿಷಯಗಳು 6ನೇ ತರಗತಿ ಪಠ್ಯದೊಂದಿಗೆ ಸಂಯೋಜಿಸಲಾಗುತ್ತದೆ. ಕಲೆ ಮತ್ತು ವಿಜ್ಞಾನದ ರೀತಿ ಪ್ರತ್ಯೇಕಗೊಳಿಸಿದ ಶಿಕ್ಷಣ ವ್ಯವಸ್ಥೆ ಇರುವುದಿಲ್ಲ.