BIG NEWS | 34 ದಿನಗಳ ಕಣ್ಣಾಮುಚ್ಚಾಲೆಗೆ ತೆರೆ: ಎಸ್‌ಐಟಿ ವಶಕ್ಕೆ ಸಂಸದ ಪ್ರಜ್ವಲ್ ರೇವಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕಳೆದ 34 ದಿನಗಳಿಂದ ನಡೆಯುತ್ತಿದ್ದ ಕಣ್ಣಮುಚ್ಚಾಲೆಗೆ ತೆರೆಬಿದ್ದಿದ್ದು, ಈ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದಿದ್ದಾರೆ.
ಭಾರತೀಯ ಕಾಲಮಾನದಲ್ಲಿ ಗುರುವಾರ ಸಂಜೆ 4.09ಕ್ಕೆ ಜರ್ಮನಿಯ ಮ್ಯೂನಿಕ್‌ನಿಂದ ಲುಫ್ತಾನ್ಸ್ ಏರ್‌ಲೈನ್ಸ್‌ನಲ್ಲಿ ಹೊರಟಿದ್ದ ಪ್ರಜ್ವಲ್, ಮಧ್ಯರಾತ್ರಿ 12.48ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿರುವ ಹಿನ್ನೆಲೆಯಲ್ಲಿ ತಕ್ಷಣವೇ ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು. ಅದಾದ ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಅಧಿಕಾರಿಗಳು, ಬಂಧನ ವಾರೆಂಟ್ ಇರುವ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಶುಕ್ರವಾರ ಪ್ರಜ್ವಲ್ ಆರೋಗ್ಯ ತಪಾಸಣೆ ನಡೆಯಲಿದ್ದು ಅದಾದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ ಎಸ್‌ಐಟಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!