ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಮಂಗಳವಾರ ಪೂರ್ವಾಹ್ನ 11ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 5 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ಒಂದು ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕುಗಳಲ್ಲಿ ತಲಾ 2 ಹೊಸ ಪ್ರಕರಣಗಳು ಕಂಡುಬಂದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,318ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವುದರೊಂದಿಗೆ ಒಟ್ಟು 34,765 ಮಂದಿ ಸೋಂಕು ಮುಕ್ತರಾಗಿದ್ದಾರೆ. ಇದುವರೆಗೆ ಒಟ್ಟು 430 ಮಂದಿ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21 ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.0.28ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.