ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಸಂಗಾಪುರ ಗ್ರಾಮದ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿದ್ದಾರೆ.
ಆಹಾರ ಸೇವನೆ ಮಾಡಿದ ಬಳಿಕ ಮಕ್ಕಳಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಮಂದಿಯನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿಯೂಟದ ಬಿಸಿಯಿಂದಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆಯೇ ಹೊರತು ಅವರಿಗೆ ಬಡಿಸಿದ ಆಹಾರದಿಂದಲ್ಲ ಎಂದು ಶಾಲೆಯ ಸಿಬ್ಬಂದಿ ಹೇಳಿದ್ದಾರೆ.
ಮಕ್ಕಳಿಗೆ ಅನ್ನ, ತರಕಾರಿ ಸಾಂಬರ್ ಬಡಿಸಲಾಗಿತ್ತು. ಆಹಾರ ತಿಂದ 30 ನಿಮಿಷಗಳ ನಂತರ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡು, ವಾಂತಿ ಮಾಡಲು ಪ್ರಾರಂಭಿಸಿದ್ದರು. 15 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.