Thursday, December 1, 2022

Latest Posts

ವಿದೇಶದಿಂದ ಬಂದ ಪ್ರಯಾಣಿಕನಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
 
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 35 ಕೋಟಿ ರೂ. ಮೌಲ್ಯದ 4.98 ಕೆಜಿ ಹೆರಾಯಿನ್‌ ಜಪ್ತಿ ಮಾಡಲಾಗಿದ್ದು, ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳಿಂದ ಇಂದು ವಿದೇಶಿ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತ ಪ್ರಯಾಣಿಕನಿಂದ 35 ಕೋಟಿ ರೂ. ಮೌಲ್ಯದ 4.98 ಕೆ.ಜಿ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ನೈರೋಬಿ (ಕೀನ್ಯಾ)ದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲಿನ ಅನುಮಾನದ ಮೇಲೆ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಅಡ್ಡಗಟ್ಟಿ ಪರಿಶೀಲಿಸಿದ್ದಾರೆ. ಆ ವೇಳೆ ಟ್ರಾಲಿ ಬ್ಯಾಗ್‌ನಲ್ಲಿ 4.98 ಕೆಜಿ ಆಫ್-ವೈಟ್ ಕಲರ್ ಪೌಡರ್ ಸಿಕ್ಕಿದ್ದು, ಅದರನ್ನು ಪರೀಕ್ಷೆಗೊಳಪಡಿಸಿದಾಗ ಹೆರಾಯಿನ್ ಎಂದು ಗೊತ್ತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!