ಛತ್ತೀಸಗಢದಲ್ಲಿ ಪೊಲೀಸರಿಗೆ ಶರಣಾದ 35 ನಕ್ಸಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 35 ನಕ್ಸಲರು ಶರಣಾಗಿದ್ದಾರೆ.

ನಕ್ಸಲರ ಪೈಕಿ ಮೂವರ ಪತ್ತೆಗೆ ಸುಳಿವು ನೀಡಿದವರಿಗೆ ತಲಾ ₹3 ಲಕ್ಷ ಹಾಗೂ ಮಹಿಳೆಯೊಬ್ಬರ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಶರಣಾದವರಲ್ಲಿ 16 ವರ್ಷದ ಬಾಲಕಿ ಮತ್ತು 18 ವರ್ಷದ ಬಾಲಕನೂ ಸೇರಿದ್ದಾನೆ. ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ಮತ್ತು ಪುನರ್‌ ವಸತಿ ನೀತಿಯ ಪ್ರಕಾರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!