ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ವ್ಯಾಯಾಮ ಮಾಡುತ್ತಿರುವವರ ಮೇಲೆ ಕಾರು ನುಗ್ಗಿದ ಪರಿಣಾಮ 35 ಮಂದಿ ಬಲಿಯಾಗಿ 43 ಜನರು ಗಾಯಗೊಂಡ ಘಟನೆ ನಡೆದಿದೆ.
ಸೋಮವಾರ ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರದಲ್ಲಿ ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ 62 ವರ್ಷದ ಚಾಲಕ ಕಾರು ನುಗ್ಗಿಸಿದ್ದಾನೆ.
ಚೈನೀಸ್ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಆಯೋಜಿಸಿದ್ದ ಝುಹೈ ಏರ್‌ಶೋ ಒಂದು ದಿನ ಮೊದಲು ಈ ಘಟನೆ ನಡೆದಿದೆ. ಇದು ಅಪಘಾತವೇ ಅಥವಾ ಪೂರ್ವ ನಿಯೋಜಿತ ಉಗ್ರರ ಕೃತ್ಯವೇ ಎಂಬ ನಿಟ್ಟಿನಲ್ಲಿ ಈಗ ತನಿಖೆ ಆರಂಭವಾಗಿದೆ.
ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೃತ್ಯದ ಬಳಿಕ ಚಾಲಕ ಚಾಕು ಬಳಸಿ ತನ್ನ ಹತ್ಯೆಗೆ ಮುಂದಾಗಿದ್ದ ಎಂದು ವರದಿಯಾಗಿದೆ.
ಸೋಮವಾರ ರಾತ್ರಿಯಿಂದಲೇ ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಮುಂದಿನ ಸೂಚನೆ ಬರುವವರೆಗೆ ವ್ಯಾಯಾಮ ಕೇಂದ್ರವನ್ನು ಬಂದ್ ಮಾಡಲಾಗಿದೆ.