ನೇರ ತೆರಿಗೆ ಆದಾಯದಲ್ಲಿ 35 ಶೇ. ಏರಿಕೆ: ಮಾಹಿತಿ ನೀಡಿದ ಹಣಕಾಸು ಸಚಿವಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಪ್ರಸಕ್ತ ಹಣಕಾಸು ವರ್ಷದಲ್ಲಿನ ನೇರ ತೆರಿಗೆ ಸಂಗ್ರಹಣೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು ಒಟ್ಟೂ ನೇರ ತೆರಿಗೆ ಆದಾಯದಲ್ಲಿ ‌35.46% ವಾರ್ಷಿಕ ಬೆಳವಣಿಗೆಯಾಗಿದೆ. ಕಾರ್ಪೊರೇಟ್ ಮತ್ತು ವೈಯಕ್ತಿಕ ತೆರಿಗೆ ಸಂಗ್ರಹಣೆಯಲ್ಲಿ ಏರಿಕೆಯಾಗಿದ್ದು ಒಟ್ಟೂ 6.48 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ದೃಢವಾದ ಆರ್ಥಿಕ ಚೇತರಿಕೆ, ಸುಧಾರಿತ ಅನುಸರಣೆ ಮತ್ತು ಉತ್ತಮ ತೆರಿಗೆ ಆಡಳಿತವನ್ನು ಸೂಚಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ವರದಿಗಳ ಪ್ರಕಾರ ನೇರ ತೆರಿಗೆ ಸಂಗ್ರಹ ಮತ್ತು ಮರುಪಾವತಿಯ ನಿವ್ವಳ 5.29 ಲಕ್ಷ ಕೋಟಿ ರೂ.ಗಳಷ್ಟಿದೆ, ಇದು ಕಳೆದ ವರ್ಷದ ಇದೇ ಅವಧಿಯ ನಿವ್ವಳ ಸಂಗ್ರಹಕ್ಕಿಂತ 30.17% ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. 2022 ರ ಏಪ್ರಿಲ್ 1 ಮತ್ತು ಸೆಪ್ಟೆಂಬರ್ 8 ರ ನಡುವೆ 1.19 ಲಕ್ಷ ಕೋಟಿ ರೂ. ಮೊತ್ತದ ಮರುಪಾವತಿಗಳನ್ನು ನೀಡಲಾಗಿದೆ, ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ನೀಡಲಾದ ಮರುಪಾವತಿಗಿಂತ 65.29% ಹೆಚ್ಚಾಗಿದೆ ಎಂದು ಅದು ಹೇಳಿದೆ.

ಈ ಅವಧಿಯಲ್ಲಿ ಒಟ್ಟು ಕಾರ್ಪೊರೇಟ್ ಆದಾಯ ತೆರಿಗೆ (ಸಿಐಟಿ) ಮತ್ತು ವೈಯಕ್ತಿಕ ಆದಾಯ ತೆರಿಗೆ (ಪಿಐಟಿ, ಸೆಕ್ಯುರಿಟೀಸ್ ವಹಿವಾಟು ತೆರಿಗೆ ಅಥವಾ ಎಸ್‌ಟಿಟಿ) ಗಳು ಕ್ರಮವಾಗಿ 25.95% ಮತ್ತು 44.37% ಬೆಳವಣಿಗೆಯನ್ನು ಕಂಡಿದೆ ಎಂದು ಮಾಹಿತಿ ನೀಡಲಾಗಿದೆ.

ಈ ಅಂಕಿ ಅಂಶಗಳು ವ್ಯಾಪಾರ ಚಟುವಟಿಕೆಗಳಲ್ಲಿನ ಹೆಚ್ಚಳವನ್ನು ಸೂಚಿಸುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!