ಹೊಸದಿಗಂತ ರಾಯಚೂರು :
ಮಂತ್ರಾಲಯದ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಬುಧವಾರ ಮಧ್ಯಾರಾಧನಾ ಮಹೋತ್ಸವದ ಅಂಗವಾಗಿ ಶ್ರೀಮಠದ ಪೀಠಾಧಿತಿಗಳಾದ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ರಥೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀ ಮಠದ ಪ್ರಾಕಾರದಲ್ಲಿ ಪ್ರಾತಃಕಾಲ ಸ್ವಾಮೀಜಿ ಮಂಗಳಾರತಿ ಮಾಡುವ ಮೂಲಕ ವಿಧ್ಯುಕ್ತವಾಗಿ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಮಹಾಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನಕ್ಕೆ ಸುಬುಧೇಂದ್ರ ತೀರ್ಥ ಶ್ರೀಪಾದಂಗಳು ಮಹಾ ಪಂಚಾಮೃತಾಭಿಷೇಕ ನಡೆಸಿಕೊಟ್ಟರು.