ಕಂದಕಕ್ಕೆ ಉರುಳಿ ಬಿದ್ದ ಬಸ್: 36 ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 36 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಇಂದು ನಡೆದಿದೆ.

ಇಂದು ಬೆಳಗ್ಗೆ55 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಈ ಬಸ್​ ದೋಡಾದ ಅಸ್ಸರ್​ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ಕನಿಷ್ಠ 36 ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಅಸ್ಸರ್‌ ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!