ರಾಜ್ಯದ 36 ಸಾವಿರ ದೇಗುಲಗಳ ಇನ್ಮುಂದೆ ಪ್ಲಾಸ್ಟಿಕ್‌ ಮುಕ್ತ: ರಾಜ್ಯ ಸರಕಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ರಾಜ್ಯ ಸರಕಾರ ಪ್ರಾರಂಭಿಸಿದೆ .

ರಾಜ್ಯದ ಎಲ್ಲ ದೇಗುಲಗಳಲ್ಲಿ ಇನ್ಮುಂದೆ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆಗಸ್ಟ್ 15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಇಂದು (ಆ. 17) ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿಸುಬ್ರಮಣ್ಯ ಅವರು ಉಪಸ್ಥಿತರಿದ್ದರು.

ಪ್ಲಾಸ್ಟಿಕ್ ಮುಕ್ತ ದೇವಾಲಯಗಳು: ರಾಜ್ಯದ 36,000 ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬೌಲ್, ಪ್ಲಾಸ್ಟಿಕ್ ತಟ್ಟೆ ಮತ್ತು ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರಸಾದ ವಿತರಣೆಯಲ್ಲಿ ಬದಲಾವಣೆ: ಇನ್ಮುಂದೆ ಪ್ರಸಾದವನ್ನು ಪ್ಲಾಸ್ಟಿಕ್ ತಟ್ಟೆ ಅಥವಾ ಲೋಟದಲ್ಲಿ ನೀಡುವಂತಿಲ್ಲ. ದೇವಾಲಯಗಳು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕಿದೆ.

ಪರಿಸರ ಜಾಗೃತಿ: ‘ಪರಿಸರ ಉಳಿಸಿ, ಪರಿಸರ ಬೆಳೆಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು.

ಕಟ್ಟುನಿಟ್ಟಿನ ಕ್ರಮ: ಒಂದು ವೇಳೆ, ಯಾವುದೇ ದೇವಾಲಯದಲ್ಲಿ ಈ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ, ಆಯಾ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!