ದೇಶದಲ್ಲಿ 3,688 ಹೊಸ ಕೋವಿಡ್‌ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,688 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ಇವುಗಳಲ್ಲಿ ದೆಹಲಿಯೊಂದರಲ್ಲೇ 1,607 ಹೊಸ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಪ್ರಸ್ತುತ ದೇಶದಲ್ಲಿ 18,684 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ಪಾಸಿಟಿವಿಟಿ ದರವು 0.74 % ಆಗಿದೆ. ಕಳೆದ 24 ಗಂಟೆಗಳಲ್ಲಿ 2,755 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕೆ ದರವು 98.74% ಆಗಿದೆ. ಇಲ್ಲಿಯವರೆಗೂ ಒಟ್ಟೂ 4,25,33,377 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು 188.89 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!