Wednesday, June 29, 2022

Latest Posts

370ನೇ ವಿಧಿ ರದ್ದು: ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಜಮ್ಮು ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಳಿಸಿ ಹಾಗೂ ಜಮ್ಮು ಕಾಶ್ಮೀರದ ರಾಜ್ಯ ವಿಭಜನೆಗೆ ಸಂಬಂಧಿಸಿದ ಪ್ರಕರಣವನ್ನು ವಿಸ್ತೃತ್ತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಪ್ರಕರಣವನ್ನು 7 ಮಂದಿ ನ್ಯಾಯ ಮೂರ್ತಿಗಳಿರುವ ವಿಸ್ತೃತ ಪೀಠಕ್ಕೆ ವರ್ಗಾಯಿಸುವುದು ಅಗತ್ಯವಿಲ್ಲ, ವರ್ಗಾವಣೆಗೆ ಯಾವುದೇ ಕಾರಣಗಳೂ ಇಲ್ಲ ಎಂದು ಪೀಠ ಹೇಳಿದೆ.

ನ್ಯಾಯಮೂರ್ತಿಗಳಾದ ಎನ್.ವಿ.ರಮಣ್, ಸಂಜಯ್ ಕೃಷ್ಣ ಕೌಲ್, ಆರ್.ಸುಭಾಷ್ ರೆಡ್ಡಿ, ಬಿ.ಆರ್.ಗವಾಯ್ ಹಾಗೂ ಸೂರ್ಯಕಾಂತ್ ಅವರನ್ನೋಳಗೊಂಡ ಪೀಠವೂ ಜ.23ರಂದು ವಿಚಾರಣೆ ಮುಗಿದಸಿದ್ದ ಪ್ರಕರಣದ ತೀರ್ಪನ್ನು ಇಂದು ಪ್ರಕಟಿಸಿತು.

ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಕೆಲವು ಹಿರಿಯ ವಕೀಲರು ಸರ್ಕಾರದ ಪರವಾಗಿ ವಾದ ಮಂಡಿಸಿ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಜಮ್ಮು ಕಾಶ್ಮೀರ ಹೈಕೋರ್ಟ್ ವಕೀಲ ಸಂಘ ಹಾಗೂ ಕೆಲವು ವಕೀಲರು ವಿಸ್ತೃತ ಪೀಠಕ್ಕೆ ಒಪ್ಪಿಸುವುದಕ್ಕೆ ಒತ್ತಾಯಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss