ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 379 ಮಂದಿಗೆ ಕೊರೋನಾ 

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 379 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 313 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 599 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಮೂರು ಮಂದಿ ಸಾವಿಗೀಡಾದರು.
ಕೇರಳದಲ್ಲಿ 23,253 ಹೊಸ ಪ್ರಕರಣ
ಕೇರಳದಲ್ಲಿ ಬುಧವಾರ ಹೊಸದಾಗಿ 23,253 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 21,366 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 47,882 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 20 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 27.38 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!