ಸಿಲಿಕಾನ್​ ಸಿಟಿಯ ಇತಿಹಾಸದಲ್ಲೇ 38.5 ಡಿಗ್ರಿ ಸೆಲ್ಸಿಯಸ್ ಅತಿ ಹೆಚ್ಚು ತಾಪಮಾನ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇನ್ನೂ ಕೆಲವು ದಿನ ಬಿಸಿ ವಾತಾವರಣ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಇದು ಬೆಂಗಳೂರಿನಲ್ಲಿ ದಾಖಲಾದ ಗರಿಷ್ಠ ತಾಪಮಾನ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 15 ದಿನಗಳ ಹಿಂದೆ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ಅಳೆಯಲಾಗಿತ್ತು.

1996ರ ಮಾರ್ಚ್​​ 27ರಂದು 37.3 ಡಿಗ್ರಿ ಸೆಲ್ಸಿಯಸ್ ಮತ್ತು 2017ರಲ್ಲಿ ಬೆಂಗಳೂರಿನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇದಾದ ನಂತರ ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!