ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನಲ್ಲಿ ವಾಸವಾಗಿದ್ದ ಶ್ರೀಲಂಕಾದ ಒಟ್ಟು 38 ಮಂದಿ ಪ್ರಜೆಗಳನ್ನು ಮಂಗಳೂರು ಪೊಲೀಸರು ಶುಕ್ರವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಉದ್ಯೋಗ ಅರಸಿಕೊಂಡು ಕೆನಡಾ ತೆರಳುವ ಯತ್ನದಲ್ಲಿದ್ದ ಶ್ರೀಲಂಕಾದ ಪ್ರಜೆಗಳು ತಮಿಳುನಾಡು ಮೂಲಕ ಮಂಗಳೂರಿಗೆ ಬಂದು ಲಾಡ್ಜ್ಗಳಲ್ಲಿ ಆಶ್ರಯ ಪಡೆದಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕ್ಕಿದ್ದು, ಎಲ್ಲರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಅವರಿಗೆ ಆಶ್ರಯ ನೀಡಿದ ಸ್ಥಳೀಯರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ವಶಕ್ಕೆ ಪಡೆದಿರುವ ೩೮ ಮಂದಿಯನ್ನು ಮಾರ್ಗಸೂಚಿ ಪ್ರಕಾರ ಕೋವಿಡ್ ತಪಾಸಣೆಗೊಳಪಡಿಸಿ ತಮಿಳುನಾಡು ಪೊಲೀಸರ ಸಹಕಾರದೊಂದಿಗೆ ಮುಂದಿನ ತನಿಖೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.
ಮಾನವ ಕಳ್ಳಸಾಗಾಟದ ಗಂಭೀರ ಪ್ರಕರಣ ಇದಾಗಿದ್ದು, ವಿದೇಶಿ ಪ್ರಜೆಗಳ ಅಕ್ರಮ ಪ್ರವೇಶ ಹಾಗೂ ವಾಸದ ಅಪರಾಧವೂ ಇದಾಗಿದೆ. ವಶಕ್ಕೆ ಒಳಗಾದ ಮಂದಿ ಉತ್ತರ ಶ್ರೀಲಂಂಕಾ ಭಾಗದ ನಿವಾಸಿಗಳೆಂದು ಗುರುತಿಸಲಾಗಿದೆ. ಇವರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವಿದೇಶಿ ಕಾಯ್ದೆ, ಐಪಿಸಿ ಸೆಕ್ಷನ್ 14ರ ವಿದೇಶಿಯರ ಕಾಯ್ದೆ 1964 ಸೆಕ್ಷನ್ 12 (1) (A) ಪಾಸ್ಪೋರ್ಟ್ ಕಾಯ್ದೆ ೧೯೬೭ರಂತೆಯೂ ಪ್ರಕರಣ ದಾಖಲಾಗಿದೆ.