ಬಿಜೆಪಿ ಸಂಪರ್ಕದಲ್ಲಿ ಟಿಎಂಸಿಯ 38 ಶಾಸಕರು: ಸ್ಫೋಟಕ ಹೇಳಿಕೆ ನೀಡಿದ ಮಿಥುನ್​ ಚಕ್ರವರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ನ 38 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ನಟ ಮಿಥುನ್​ ಚಕ್ರವರ್ತಿ ಬಾಂಬ್​ ಸಿಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಟಿಎಂಸಿಯ 38 ಶಾಸಕರ ಪೈಕಿ 21 ಎಂಎಲ್​​ಎಗಳು ನೇರವಾಗಿ ನಮ್ಮೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
ನೀವು ಈ ಕ್ಷಣದಲ್ಲಿ ಬ್ರೇಕಿಂಗ್​ ನ್ಯೂಸ್​ ಕೇಳಲು ಬಯಸುವಿರಾ? 38 ಟಿಎಂಸಿ ಶಾಸಕರು ನಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ, ಅವರಲ್ಲಿ 21 ಮಂದಿ ನೇರ ಸಂಪರ್ಕದಲ್ಲಿದ್ದಾರೆ ಎಂದರು. ಈ ಮೂಲಕ ಪಶ್ಚಿಮ ಬಂಗಾಳದಲ್ಲೂ ಆಪರೇಷನ್​ ಕಮಲದ ಸುಳಿವು ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!