ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ಮಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆರ್ ಆರ್ ನಗರದ ಅಪಾರ್ಟ್ಮೆಂಟ್ ಗಳಲ್ಲಿ ಮತಯಾಚನೆ ಮಾಡಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಈ ಬೆನ್ನಲ್ಲೇ ಮಾಹಿತಿ ಪಡೆದು ಎಫ್ಐಆರ್ ದಾಖಲು ಮಾಡಲಾಗಿದೆ.
ಸಹೋದರ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತ ಯಾಚನೆ ಮಾಡಿದ್ದರು ಈ ವೇಳೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 171(B)(C)(E)(F) ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.