ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತನಿಖೆ ನಡೆಸಿದ ಪೊಲೀಸರು 17 ಆರೋಪಿಗಳ ವಿರುದ್ಧ 3991 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದ್ದು, ಇಂಚಿಂಚು ಮಾಹಿತಿಯನ್ನು ಚಾರ್ಜ್‌ಶೀಟ್‌ನಲ್ಲಿ ದಾಖಲು ಮಾಡಲಾಗಿದೆ.
ರೇಣುಕಾಸ್ವಾಮಿ ಮೇಲಿನ ಭೀಕರ ಹಲ್ಲೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕೊಲೆಯ ಭೀಕರತೆ ಬಗ್ಗೆ ಮಾಹಿತಿ ಇದೆ.
ರೇಣುಕಾಸ್ವಾಮಿ ಮೃತದೇಹದ ಮೇಲೆ 39 ಗಾಯದ ಗುರುತು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವೇಳೆ 39 ಕಡೆ ಗಾಯಗಳು ಪತ್ತೆಯಾಗಿವೆ. ಪ್ರಮುಖವಾಗಿ ಎದೆಮೂಳೆ ಮುರಿತ, ತಲೆಯಲ್ಲಿ ಆಳವಾದ ಗಾಯ ಪತ್ತೆಯಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
ವೃಷಣಕ್ಕೆ ಹಾನಿ ಹಾಗೂ ಕರೆಂಟ್ ಶಾಕ್ ಕೊಟ್ಟು ಗ್ಯಾಂಗ್ ಕೊಲೆ ಮಾಡಿದೆ. ಆರೋಪಿಗಳು ಅತಿ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ ಮಾಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.