ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕುಸಿದು ಬಿಳುತ್ತಿರೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಝೆಬಾರ್ ಶಾಲೆಯ 3 ನೇ ತರಗತಿಯ ವಿದ್ಯಾರ್ಥಿನಿಯು ಶಾಲೆಯ ಲಾಬಿಯಲ್ಲಿ ಅಸ್ವಸ್ಥತೆಗೊಂಡು ಬೆಂಚ್ ಮೇಲೆ ಕುಳಿತುಕೊಂಡಿದ್ದಾಕೆ ಏಕಾಏಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದಾದ ಕೆಲವು ಸೆಕೆಂಡುಗಳ ನಂತರ ಹತ್ತಿರದಲ್ಲೇ ನಿಂತುಕೊಂಡಿದ್ದ ಶಿಕ್ಷಕರು ಅವಳ ಸಹಾಯಕ್ಕೆ ಧಾವಿಸುತ್ತಾರೆ. ಕೂಡಲೇ ಶಿಕ್ಷಕರು ಬಾಲಕಿಗೆ ಸಿಪಿಆರ್ ನೀಡಲು ಪ್ರಯತ್ನಿಸಿದ್ದಾರೆ. ಬಳಿಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಿದ್ಯಾರ್ಥಿ ಅಷ್ಟೋತ್ತಿಗೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಶಾಲೆಯ ಪ್ರಾಂಶುಪಾಲೆ ಶರ್ಮಿಷ್ಠ ಸಿನ್ಹಾ ಪ್ರಕಾರ, ಬಾಲಕಿಗೆ ಈ ಹಿಂದೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ, ಶುಕ್ರವಾರ ಅಸ್ವಸ್ಥಳಾಗಿದ್ದ ಆಕೆ ಶಾಲೆಯ ಲಾಬಿಯಲ್ಲಿ ಬೆಂಚ್ ಮೇಲೆ ಕುಳಿತು ಕುಸಿದು ಬಿದ್ದಿದ್ದಾಳೆ. ಬಾಲಕಿಗೆ ಉಸಿರಾಟದ ತೊಂದರೆ ಇದೆ ಎಂದು ಸಿನ್ಹಾ ಹೇಳಿದ್ದಾರೆ. ನಂತರ ಆಕೆಯನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟೋತ್ತಿಗೆ ಅವಳು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಸಂಶೋಧನೆಗಳ ಪ್ರಕಾರ ವಿದ್ಯಾರ್ಥಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನೂ ಮೃತ ವಿದ್ಯಾರ್ಥಿನಿಯ ಪೋಷಕರು ಮುಂಬೈನಲ್ಲಿ ವಾಸಿಸುತ್ತಿದ್ದರು. ಆದರೆ ವಿದ್ಯಾರ್ಥಿನಿ ಅಹಮದಾಬಾದ್‌ನಲ್ಲಿ ತನ್ನ ಅಜ್ಜಿಯರೊಂದಿಗೆ ಇದ್ದಳಂತೆ.