SHOCKING NEWS | 2 ವಾರದಲ್ಲಿ 3ನೇ ಸಾವು: ತಮಿಳುನಾಡಿನಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಮತ್ತೆ ಇಂದು 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.
ವಿದ್ಯಾರ್ಥಿನಿಯು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು ಪೋಷಕರು ಐಎಎಸ್‌ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಿನ್ನೆಯಷ್ಟೇ ತಿರುವಳ್ಳೂರು ಜಿಲ್ಲೆಯ ಕಿಲಾಚೇರಿ ಹಾಸ್ಟೆಲ್‌ವೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 13 ರಂದು ವಸತಿ ಶಾಲೆಯಲ್ಲಿ 12 ನೇ ತರಗತಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಕಳೆದ ಎರಡು ವಾರಗಳಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಖಂಡಿಸಿ ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!