Saturday, June 25, 2022

Latest Posts

4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಕಾಮುಕನ ಕಾಲಿಗೆ ಗುಂಡೇಟು

ಬೆಂಗಳೂರು: 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ದಿನೇಶ್ ಎಂದು ಗುರುತಿಸಲಾಗಿದ್ದು, ಮೆಜೆಸ್ಟಿಕ್​ನಿಂದ ನಿನ್ನೆ ಮಧ್ಯಾಹ್ನ ನಾಲ್ಕು ವರ್ಷದ ಹೆಣ್ಣು ಮಗುವನ್ನು ಅಪಹರಣ ಮಾಡಿ, ನಂತರ ಮಗುವಿನ ಮೇಲೆ ಲೈಂಗಿಕ‌ ದೌರ್ಜನ್ಯವೆಸಗಿದ್ದ. ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿರ್ಜನ ಪ್ರದೇಶಕ್ಕೆ ಮಗುವನ್ನು ಕರೆದೊಯ್ದು ಅತ್ಯಾಚಾರ ನಡೆಸಿ ಅಲ್ಲಿಂದ ಪರಾರಿಯಾಗಿದ್ದ. ಆತನಿಗಾಗಿ ನಿನ್ನೆ ಮಧ್ಯಾಹ್ನದಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆರೋಪಿ ಇರುವ ಸ್ಥಳದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಆ ಮಾಹಿತಿಯನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಲು ಹೋಗಿದ್ದರು. ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಬಂದಾಗ ಆತ್ಮರಕ್ಷಣೆಗೆ ಆರೋಪಿಯ ಕಾಲಿಗೆ ಇನ್​ಸ್ಪೆಕ್ಟರ್​ ಸುನೀಲ್ ನಾಯ್ಕ್ ಗುಂಡು ಹಾರಿಸಿದ್ದಾರೆ.

ಆರೋಪಿ ಕಾಲಿಗೆ ಗುಂಡೇಟು ತಗುಲಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss