ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮುಂಜಾನೆ 10.10ಕ್ಕೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಆಳ 10 ಕಿ.ಮೀ ಇತ್ತು ಎಂದು ತಿಳಿಸಿದೆ. ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.