ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟರ್ಕಿಯ ಅಫ್ಸಿನ್‌ನಿಂದ 23 ಕಿಮೀ ನೈಋತ್ಯದಲ್ಲಿ ಸೋಮವಾರ ಬೆಳಗ್ಗೆ 4.0 ತೀವ್ರತೆಯ ಭೂಕಂಪನವು ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ.
ಭೂಕಂಪವು 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಮಾಹಿತಿ ನೀಡಿದೆ. ಈವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.