ಉತ್ತರಾಖಂಡದ ಪಿಥೋರಗಢ್​​ದಲ್ಲಿ ಭೂಕಂಪ: 4.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಾಖಂಡದ ಪಿಥೋರಗಢ್‌ದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 4.0 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪನ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 9:11ಕ್ಕೆ ಪಿಥೋರಘರ್‌ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಲ್ಲಿನ ಆಡಳಿತ ಸ್ಪಷ್ಟಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!