ಫೈಜಾಬಾದ್‌ನಲ್ಲಿ ಕಂಪಿಸಿದ ಭೂಮಿ: 4.1ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರತಿದಿನ ಭೂಕಂಪಗಳ ಸರಮಾಲೆಗಳ ಸದ್ದು ಕೇಳಿಬರುತ್ತಿವೆ. ಟರ್ಕಿ-ಸಿರಿಯಾ ಭೂಕಂಪದ ಬಳಿಕ ಜಗತ್ತಿನ ನಾನಾ ಭಾಗಗಳಲ್ಲಿ ಭೂಮಿ ಕಂಪಿಸುತ್ತಿದೆ. ಇದೀಗ ಮತ್ತೊಮ್ಮೆ ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದೆ. ಒಂದು ವಾರದಲ್ಲಿ ಇದು ಎರಡನೇ ಘಟನೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ ಗುರುವಾರ ಬೆಳಗಿನ ಜಾವ 02:35:57 IST ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಪೂರ್ವ ಈಶಾನ್ಯಕ್ಕೆ 267 ಕಿಮೀ ದೂರದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಟ್ವೀಟ್‌ ಮಾಡಿದೆ.

37.73 ಅಕ್ಷಾಂಶ ಮತ್ತು 73.47 ರೇಖಾಂಶದಲ್ಲಿ 245 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣ ಹಾನಿ-ಆಸ್ತಿ ಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!