Wednesday, June 7, 2023

Latest Posts

ಜಮ್ಮು ಮತ್ತು ಕಾಶ್ಮೀರದಲ್ಲಿ ನಡುಗಿದ ಭೂಮಿ: 4.1 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಮುಂಜಾನೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ದಾಖಲಾಗಿದೆ.

ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭಾನುವಾರ ಬೆಳಗ್ಗೆ 5.15ಕ್ಕೆ ಭೂಕಂಪ ಸಂಭವಿಸಿದೆ.
ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಎಲ್ಲರೂ ತಮ್ಮ ತಮ್ಮ ಮನೆಗಳಿಂದ ಹೊರಬಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ ಸಂಭವಿಸುವ ಭೂಕಂಪಗಳು ಮತ್ತು ನೈಸರ್ಗಿಕ ವಿಕೋಪಗಳನ್ನುಗಮನದಲ್ಲಿಟ್ಟುಕೊಂಡು, ಕೇಂದ್ರಾಡಳಿತ ಪ್ರದೇಶದ ಆಡಳಿತವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ನೈಸರ್ಗಿಕ ವಿಕೋಪಗಳಿಂದಾಗುವ ನಷ್ಟವನ್ನು ಕಡಿಮೆ ಮಾಡಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಎಲ್ಲಾ 20 ಜಿಲ್ಲೆಗಳಲ್ಲಿ ಅತ್ಯಾಧುನಿಕ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (ಇಒಸಿ) ಸ್ಥಾಪಿಸಲು ನಿರ್ಧಾರ ಕೈಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!