ಅಫ್ಘಾನಿಸ್ತಾನದ ಫರ್ಖರ್ ಜಿಲ್ಲೆಯಲ್ಲಿ ನಡುಗಿದ ಭೂಮಿ : 4.2 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ ಸೋಮವಾರದಂದು 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ ಭೂಕಂಪವು ಬೆಳಗ್ಗೆ 04:53:29 (UTC+05:30) ಸಮಯಕ್ಕೆ 124.1 ಕಿಮೀ ಆಳದಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!