ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಶುಕ್ರವಾರ ಮುಂಜಾನೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಿಂದ 112 ಕಿಮೀ ದೂರದಲ್ಲಿ ಕಂಪನ ಬಿಂದುವನ್ನು 112 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಲ್ಲಿನ ಆಡಳಿತ ಸ್ಪಷ್ಟಪಡಿಸಿದೆ.