ಹೊಸದಿಗಂತ ಡಿಜಿಟಲ್ ಡೆಸ್ಕ್:
ತಜಕಿಸ್ತಾನದಲ್ಲಿ ಇಂದು (ಭಾನುವಾರ) ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. NCS ಪ್ರಕಾರ, ಭೂಕಂಪವು 170 ಕಿಮೀ ಆಳದಲ್ಲಿ ಸಂಭವಿಸಿದೆ.
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಆಸ್ತಿ-ಪಾಸ್ತಿ ನಷ್ಟವಾಗಿರುವುದಾಗಿ ಮಾಹಿತಿ ಲಭ್ಯವಿಲ್ಲ.