ಬಂಗಾಳಕೊಲ್ಲಿಯಲ್ಲಿ ಭೂಕಂಪ: 4.4 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಂಗಾಳಕೊಲ್ಲಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 4.4 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಸೋಮವಾರ ಬೆಳಿಗ್ಗೆ 1.29ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು ಭೂಮಿಯ ಮೇಲ್ಮೆಯಿಂದ 70 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ.

ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!