ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ದೇಶದಲ್ಲಿ ಅಪಘಾತಗಳಿಂದ ಮೃತಪಟ್ಟಿರುವವರ ಸಂಖ್ಯಾಂಶಗಳ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
2017 ರಿಂದ 2019 ರವರೆಗೆ ದೇಶದಲ್ಲಿ 4,50,443ಕ್ಕೂ ಹೆಚ್ಚು ಮಂದಿ ಜನರು ಮೃತಪಟ್ಟಿದ್ದಾರೆ.
ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದು, 2017 ರಲ್ಲಿ ಒಟ್ಟು 1,47,913, 2018 ರಲ್ಲಿ ಒಟ್ಟು 1,51,417 , 2019ರಲ್ಲಿ 1,51,113 ಜನರು ಮೃತಪಟ್ಟಿದ್ದಾರೆ ಎಂದಿದ್ದಾರೆ.
ಶಿಕ್ಷಣ,ತಾಂತ್ರಿಕತೆ ಕಾನೂನು ಜಾರಿ ಮತ್ತು ತುರ್ತು ಆರೈಕೆ ಬಗ್ಗೆ ಕಾಳಜಿ ವಹಿಸಲಾಗುವುದು. ರಸ್ತೆ ಸುರಕ್ಷತೆ ಸಮಸ್ಯೆ ಪರಿಹರಿಸಲು ಸಚಿವಾಲಯ ಬಹುಮುಖಿ ಕಾರ್ಯತಂತ್ರವನ್ನು ರೂಪಿಸಿದೆ ಎಂದಿದ್ದಾರೆ.