ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಸ್ತಳೀಯ ಕಾಲಮಾನದ ಪ್ರಕಾರ ಭಾನುವಾರ ಮುಂಜಾನೆ 1:25ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಅಫ್ಘಾನಿಸ್ತಾನದ ಫೈಜಾಬಾದ್ನ ಪೂರ್ವಕ್ಕೆ 328 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ.
ಈ ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.