ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪನ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 1:20ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಮಕ್ವಾನ್ಪುರ ಜಿಲ್ಲೆಯ ಚಿಟ್ಲಾಂಗ್ ಪ್ರದೇಶದಲ್ಲಿ ಕಂಪನ ಬಿಂದುವನ್ನು ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.