ನೇಪಾಳದಲ್ಲಿ ಭೂಕಂಪ: 4.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಶ್ಚಿಮ ನೇಪಾಳದ ಬಜಾಂಗ್ ಜಿಲ್ಲೆಯ ಪೂರ್ವದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.

ಇಂದು ಬೆಳಿಗ್ಗೆ 4.06 ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ.

ಪಶ್ಚಿಮ ನೇಪಾಳದ ಬಜಾಂಗ್‌ನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ಈವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!