ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಗಿಲ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ.
ಲಡಾಖ್ನ ಉತ್ತರಕ್ಕೆ 401 ಕಿ.ಮೀ ದೂರದಲ್ಲಿ ಕಾರ್ಗಿಲ್‌ನಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ
ಭೂಕಂಪ ಸಂಭವಿಸಿದೆ. ಈ ವರೆಗೆ ಯಾವುದೇ ಆಸ್ತಿ, ಪ್ರಾಣ ಹಾನಿಯಾಗಿರುವುದು ವರದಿಯಾಗಿಲ್ಲ.