ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಹೇಳಿದೆ.
ದೋಡಾ ಪ್ರದೇಶದಲ್ಲಿ ಇಂದು ಬೆಳಗ್ಗೆ 5.38ಕ್ಕೆ ಭೂಮಿಯ ಮೇಲ್ಮೈಯಿಂದ 10 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ. ಈವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.