ಹೊಸದಿಗಂತ ವರದಿ, ಮೈಸೂರು:
ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡುವ ಮೂಲಕ ಹಣ, ಚಿನ್ನಾಭರಣವನ್ನು ಸುಲಿಗೆ ಮಾಡಿದ್ದ 4ಮಂದಿ ದರೋಡೆಕೋರರನ್ನು ಮೈಸೂರಿನ ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.
ವಿಷ್ಣು (19), ಗಿರೀಶ (19), ಅಜಿತ್ ಕುಮಾರ್ (19) ಹಾಗೂ ಯಶವಂತ (22) ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿoದ 14 ಸಾವಿರ ರೂ. ನಗದು, 1 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಆರೋಪಿಗಳು ಮಾರ್ಚ್ 4ರ ರಾತ್ರಿ 10.30ರಂದು ಮೈಸೂರಿನ ಮೇಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ, ಅವರ ಹಲ್ಲೆ ಮಾಡಿ, ಬಳಿಯಿದ್ದ 28 ಸಾವಿರ ನಗದು, 25 ಗ್ರಾಂ ತೂಕದ ಚಿನ್ನದ ಸರ ಮತ್ತು ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.