ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ತಮಿಳುನಾಡಿನ ಕೊಯಮತ್ತೂರು ನಗರದಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಇಲ್ಲಿನ ಮಹಲಿಯಮ್ಮನ್ ದೇವಸ್ಥಾನದ ಬಳಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೊಯಮತ್ತೂರು ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್, “ಮಾರ್ಚ್ 12 ರಂದು ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಹಿಂದುತ್ವ ಸಂಘಟನೆಯ ಇಬ್ಬರು ಯುವಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳು ಘಟನೆಯ ವೇಳೆ ಮದ್ಯದ ಅಮಲಿನಲ್ಲಿದ್ದರು. ಈ ನಾಲ್ವರ ವಿರುದ್ಧ ಪಿಎಸ್ ವೆರೈಟಿ ಹಾಲ್ ರಸ್ತೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದರು.

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವರದಿಗಳು ಹಬ್ಬಿದ್ದವು. ಈ ವಿಷಯದ ಹಿನ್ನೆಲೆ ತಿಂಗಳ ಆರಂಭದಲ್ಲಿ ಬಾಲಮುರುಗನ್ ಐಎಎಸ್ ನೇತೃತ್ವದ ಬಿಹಾರದ ತಂಡವು ತಮಿಳುನಾಡಿಗೆ ಭೇಟಿ ನೀಡಿ ವಿಷಯದ ಬಗ್ಗೆ ಪರಿಶೀಲನೆ ನಡೆಸಿತು.

ತಂಡವು ತಿರುಪ್ಪೂರ್‌ಗೆ ಭೇಟಿ ನೀಡಿದ್ದು, ಪ್ರಕರಣದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿತು. ಬಿಹಾರ ಸರ್ಕಾರದ ಅಧಿಕಾರಿಗಳು ಚೆನ್ನೈನಲ್ಲಿ ಬಿಹಾರ ಮೂಲದ ವಲಸೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಮಾರ್ಚ್ 9 ರಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ವಲಸೆ ಕಾರ್ಮಿಕರ ಮೇಲಿನ ದಾಳಿಯ ಬಗ್ಗೆ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ತಮಿಳುನಾಡಿನಲ್ಲಿ ಅಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು.

ತಮಿಳುನಾಡಿನಲ್ಲಿ ಬಿಹಾರಿ ವಲಸಿಗರ ಮೇಲೆ ನಡೆದ ಆಪಾದಿತ ಹಲ್ಲೆ ಎರಡೂ ರಾಜ್ಯಗಳಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿ ಮಾಡಿತ್ತು. ಈ ವಿಚಾರವಾಗಿ ಎಲ್‌ಜೆಪಿ ಮುಖ್ಯಸ್ಥ ಬಿಹಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!