ರಾಜಸ್ಥಾನದ ಜೋಧ್‌ಪುರದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: 4 ಸಾವು, 16 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜಸ್ಥಾನದ ಜೋಧ್‌ಪುರದಲ್ಲಿ ಶನಿವಾರ ಅಡುಗೆ ಅನಿಲ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ.
ಸ್ಫೋಟದಲ್ಲಿ 16 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೋಧ್‌ಪುರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಜೋಧಪುರದ ಮಗ್ರಾ ಪುಂಜ್ಲಾ ಪ್ರದೇಶದ ವಸತಿ ಕಾಲೋನಿಯಲ್ಲಿ ಸ್ಫೋಟ ಸಂಭವಿಸಿದೆ. ಸಂತ್ರಸ್ತರು ಸಜೀವ ದಹನವಾಗಿದ್ದು, ಅವರ ದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಗಾಯಗೊಂಡ 16 ಮಂದಿಯೂ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಿಲಿಂಡರ್‌ಗಳನ್ನು ಅಕ್ರಮವಾಗಿ ಒಂದು ಸಿಲಿಂಡರ್‌ನಿಂದ ಇನ್ನೊಂದಕ್ಕೆ ಮರುಪೂರಣ ಮಾಡುವಾಗ ಸ್ಫೋಟ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!