ಔಷಧ ಕಾರ್ಖಾನೆಯಲ್ಲಿ ಅಗ್ನಿ ದುರಂತ: ನಾಲ್ವರು ಸಾವು, ಹಲವರು ನಾಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಔಷಧ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಅಮೃತಸರದಲ್ಲಿ ನಡೆದಿದೆ.

ನಗರದ ಮಜಿತಾ ರಸ್ತೆಯಲ್ಲಿ ನಿನ್ನೆ ರಾತ್ರಿ ಈ ಅವಘಡ ನಡೆದಿದೆ. ಕಾರ್ಖಾನೆಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ.

ಕೆಲಸದ ನಿಮಿತ್ತ ಕಾರ್ಮಿಕರು ಕಾರ್ಖಾನೆಯೊಳಗೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಅಚಾತುರ್ಯ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಉಳಿದವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.

ವಿಷಯ ತಿಳಿದ ಕೂಡಲೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರ ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಕಾರ್ಖಾನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಗಳು ಇದ್ದದ್ದು ಬೆಂಕಿಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವೇ ಹೊರಬೀಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!