ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಪ್ರಸಿದ್ಧ ಪಟಾಕಿ ತಯಾರಕ ಸ್ಥಳ ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಶಿವಕಾಶಿ ಸಮೀಪದ ಮೆಟ್ಟುಪಟ್ಟಿ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆಗಳು ರಕ್ಷಣಾ ಕರ್ಯಾದಲ್ಲಿ ನಿರತವಾಗಿವೆ.
ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸಗೊಂಡಿದ್ದು, ನಾಲ್ವರು ಸಜೀವ ದಹನಗೊಂಡಿದ್ದಾರೆ. ಅಗ್ನಿ ಶಾಮಕ ದಳದ ತಂಡ ಕಾರ್ಖಾನೆಯ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ.
ಇನ್ನು ಕಟ್ಟಡದ ಅವಶೇಷಗಳ ಅಡಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!