Wednesday, December 7, 2022

Latest Posts

ಪೆಟ್ರೋಲ್‌ ಸಾಗಿಸುತ್ತಿದ್ದ ಟ್ಯಾಂಕರ್‌ ಗೆ ಬೆಂಕಿ: ನಾಲ್ವರು ಸಾವು, 12 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಿಜೋರಾಂನ ತುಯಿರಿಯಾಲ್ ಏರ್‌ಫೀಲ್ಡ್ ಬಳಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ರಾಜ್ಯ ರಾಜಧಾನಿ ಐಜ್ವಾಲ್‌ನಿಂದ ಪೂರ್ವಕ್ಕೆ 18 ಕಿಲೋಮೀಟರ್ ದೂರದಲ್ಲಿರುವ ತುಯಿರಿಯಲ್ ಗ್ರಾಮದಲ್ಲಿ ಸಂಜೆ 6 ಗಂಟೆಗೆ ಟ್ಯಾಂಕರ್ ಚಂಫೈಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಟ್ಯಾಂಕರ್‌ನಿಂದ ಸೋರುತ್ತಿದ್ದ ಪೆಟ್ರೋಲ್ ಸಂಗ್ರಹಿಸಲು ಸ್ಥಳೀಯರು ಯತ್ನಿಸಿದಾಗ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಗಾಯಗೊಂಡವರು ಹಾಗೂ ಮೃತಪಟ್ಟವರಲ್ಲಿ ಹಲವರು ಇಂಧನ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದರೆ, ಇತರರು ಧ್ವಂಸಗೊಂಡ ಟ್ಯಾಂಕರ್‌ನಿಂದ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!