ಅರ್ಪಿತಾ ಮುಖರ್ಜಿ ಮನೆಯಿಂದ 4 ಬೆಲೆಬಾಳುವ ಕಾರು ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಶಾಲಾ ನೇಮಕಾತಿ ಹಗರಣ ಮತ್ತು ಅಕ್ರಮಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ರಾಜಕಾರಣಿ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಈ ಕುರಿತು ಒಂದಾಧ ಮೇಲೊಂದು ಹೈಡ್ರಾಮಾ ವರದಿಯಾಗುತ್ತಲೇ ಇದೆ. ಈ ನಡುವೆ ಮತ್ತೊಂದು ಅಂತಹುದೇ ನಾಟಕೀಯ ಬೆಳವಣಿಗೆಯಾಗಿರುವ ಕುರಿತು ಮೂಲಗಳು ವರದಿ ಮಾಡಿವೆ.

ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಎಂಬುವವರ ಮನೆಯ ಮೇಲೂ ಇಡಿ ದಾಳಿ ನಡೆಸಿದ್ದು ಕೋಟಿ ಕೋಟಿ ರೂಪಾಯಿ ಹಣ ದೊರೆತಿದೆ. ಆದರೆ ಅರ್ಪಿತಾ ಅವರ ಮನೆಯಿಂದ ನಾಲ್ಕು ಐಷಾರಾಮಿ ಕಾರುಗಳು ನಾಪತ್ತೆಯಾಗಿದೆ ಎನ್ನಲಾಗಿದೆ. ಕೋಲ್ಕತ್ತಾದ ಡೈಮಂಡ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಅರ್ಪಿತಾ ಮುಖರ್ಜಿ ನಿವಾಸದಿಂದ ನಾಲ್ಕು ಐಷಾರಾಮಿ ಕಾರುಗಳು ನಾಪತ್ತೆಯಾಗಿವೆ. ಮೂಲಗಳ ಪ್ರಕಾರ, ಅರ್ಪಿತಾ ಅವರನ್ನು ಫ್ಲಾಟ್‌ನಲ್ಲಿ ಬಂಧಿಸಿದಾಗಿನಿಂದ ಈ ಕಾರುಗಳು ನಾಪತ್ತೆಯಾಗಿವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಕಾರುಗಳ ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!