Thursday, June 30, 2022

Latest Posts

ಬಲೂನ್’ಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟ: 4 ಬಲಿ, 10 ಮಂದಿಗೆ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಲೂನ್ ನಿಗೆ ಗಾಳಿ ತುಂಬಿಸುವ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಎರಡು ಪ್ರತ್ಯೇಕ ಘಟನೆಗಳು ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಚಿಂದ್ವಾರದಲ್ಲಿ ಅನ್ಸಾರಿ (40) ಮತ್ತು ಶೇಕ್ ಇಸ್ಮಾಯಿಲ್ (70) ಮೃತರು, ಉತ್ತರಪ್ರದೇಶದ ವಾರಣಾಸಿಯಲ್ಲಿ ಗೀತಾ ದೇವಿ (40) ಮತ್ತು ಲಲ್ಲಾ (30) ಮೃತಪಟ್ಟಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss