ವೇಗವಾಗಿ ಬಂದ ಕಾರು ಕಂಟೈನರ್‌ ಗೆ ಡಿಕ್ಕಿ ಹೊಡೆದು 4 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್‌
ರಾಜಸ್ಥಾನದ ಅಜ್ಮೀರ್‌ನಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಕಂಟೈನರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ ದಾರುನ ಘಟನೆ ಗುರುವಾರ ಸಂಜೆ ನಡೆದಿದೆ.
ಬಂಡನ್ವಾರ ನಗರದ ಬಳಿಯ ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್, ಸಂದೀಪ್ ಸಿಂಗ್, ಶೇರ್ ಸಿಂಗ್, ಸತ್ವೀರ್ ಎಂದು ಗುರುತಿಸಲಾಗಿದೆ. ಅವರು ಮಧ್ಯಪ್ರದೇಶದ ಉಜ್ಜಯಿನಿಯಿಂದ ಮಹಾಕಾಲ್‌ಗೆ ಭೇಟಿ ನೀಡಿದ ನಂತರ ಕೊಟ್‌ಪುಟ್ಲಿಗೆ ಹಿಂತಿರುಗುತ್ತಿದ್ದರು.
ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48 ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದಕಂಟೈನರ್‌ ಗೆ ಅವರ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಚೌಕಿ ಉಸ್ತುವಾರಿ ಗಿರಧಾರಿ ಸಿಂಗ್ ಮೇಜಪ್ತಾ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ವಾಹನದಿಂದ ಹೊರತೆಗೆದಿದ್ದಾರೆ. ಹೆದ್ದಾರಿ ಆಂಬ್ಯುಲೆನ್ಸ್ ಸಹಾಯದಿಂದ ಮೃತದೇಹಗಳನ್ನು ಭಿನಾಯ್‌ನಲ್ಲಿರುವ ಶವಾಗಾರಕ್ಕೆ ಕಳುಹಿಸಲಾಗಿದೆ.
ಬಹುತೇಕ ಕಂಟೈನರ್‌ ಗಳು ಎನ್‌ಎಚ್‌ 48ರಲ್ಲಿ ರಸ್ತೆಬದಿಯಲ್ಲಿ ನಿಂತಿರುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಕೂಡ ರಸ್ತೆ ಮಾರ್ಗದ ಬಸ್ ಟ್ರೈಲರ್‌ಗೆ ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!