Thursday, March 23, 2023

Latest Posts

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವೇಗವಾಗಿ ಬಂದ ಟೆಂಪೋ ಒಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು,
ಅಪಘಾತಕ್ಕೂ ಮುನ್ನ ಸ್ಕೂಟರ್‌ನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದ ವಿಡಿಯೋ ಕೂಡ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಇನ್ನಿಬ್ಬರು ಮಕ್ಕಳು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ.

ಲಾತೂರ್ ತಹಸಿಲ್‌ನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಮೃತರನ್ನು ಹಮೀದ್ ಚಂದುಲಾಲ್ ಸಯ್ಯದ್ (45, ಡೊಂಗರಗಾಂವ್ ಬವಲ್ಗಾಂವ್ ನಿವಾಸಿ, ಮುಖೇದ್, ನಾಂದೇಡ್ ಜಿಲ್ಲೆಯ ನಿವಾಸಿ) ಮತ್ತು ಆನಂದ್ ಗೋವಿಂದರಾವ್ ಕದಮ್ (ಬಬಲ್ಗಾಂವ್, ಅಹಮದ್ಪುರ್ ತಹಸಿಲ್, ಲಾತೂರ್ ನಿವಾಸಿ) ಎಂದು ಗುರುತಿಸಲಾಗಿದೆ. ಟೆಂಪೋ ಪಲ್ಟಿಯಾಗಿ ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!