ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳ ಅಡಿ ಹಲವರು ಸಿಲುಕಿರೋ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಉತ್ತರ ದೆಹಲಿಯ ಬುರಾರಿಯಲ್ಲಿರುವ ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿ ಸೋಮವಾರ ಸಂಜೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿ ಬಿದ್ದಿದ್ದು, ಈ ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಎಫ್ಎಸ್ ಪ್ರಕಾರ, ಬುರಾರಿಯ ಕೌಶಿಕ್ ಎನ್ಕ್ಲೇವ್ನ ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿಯ ಮನೆಯೊಳಗೆ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈಗಾಗಲೇ 8 ಮಂದಿಯನ್ನು ರಕ್ಷಿಸಲಾಗಿದೆ.

ಒಟ್ಟು ಒಂಬತ್ತು ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!